Luke 7:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರೆಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
Kannada BSI Bible 2016
ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಂದೆ ಆತನ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತ್ಯಾವಮಾಡಿ ತನ್ನ ತಲೇಕೂದಲಿನಿಂದ ಒರಸಿ ಅವುಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
Kannada Bible (KNCL) BSI 2016
ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಪಾದಗಳ ಬಳಿಯಲ್ಲಿ ನಿಂತು, ಅಳುತ್ತಾ ಅವರ ಪಾದಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ, ತನ್ನ ತಲೆಕೂದಲಿನಿಂದ ಒರೆಸಿ, ಅವರ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.