Luke 7:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು.
Kannada BSI Bible 2016
ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.
Kannada Bible (KNCL) BSI 2016
ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.