Luke 7:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ಇಬ್ಬರು ಮನುಷ್ಯರಿದ್ದರು. ಅವರಿಬ್ಬರೂ ಒಬ್ಬನೇ ಸಾಹುಕಾರನಿಂದ ಹಣವನ್ನು ಬಡ್ಡಿಗೆ ತೆಗೆದುಕೊಂಡಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು. ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು.
Kannada BSI Bible 2016
ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು - ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐನೂರು ಹಣ ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಹಣ ಕೊಡಬೇಕಾಗಿತ್ತು.
Kannada Bible (KNCL) BSI 2016
ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು, “ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು, ಒಬ್ಬನು ಐದು ನೂರು ಬೆಳ್ಳಿ ನಾಣ್ಯಗಳನ್ನೂ, ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನೂ ಕೊಡಬೇಕಾಗಿತ್ತು.