Luke 7:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಲ್ಲಿ ಹಣವಿರಲಿಲ್ಲ. ಆದ್ದರಿಂದ ಅವರು ಸಾಲ ತೀರಿಸಲು ಆಗಲಿಲ್ಲ. ಸಾಹುಕಾರನು ಅವರಿಗೆ, ‘ನೀವು ಸಾಲ ತೀರಿಸಬೇಕಾಗಿಲ್ಲ’ ಎಂದು ಹೇಳಿದನು. ಆ ಇಬ್ಬರಲ್ಲಿ ಯಾರು ಹೆಚ್ಚಾಗಿ ಸಾಹುಕಾರನನ್ನು ಪ್ರೀತಿಸುವರು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ,
Kannada BSI Bible 2016
ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೀರಿಸುವದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಬಿಟ್ಟುಬಿಟ್ಟನು. ಹಾಗಾದರೆ ಅವರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸಾನು ಎಂದು ಕೇಳಿದ್ದಕ್ಕೆ ಸೀಮೋನನು -
Kannada Bible (KNCL) BSI 2016
ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರಿಬ್ಬರಿಗೂ ಸಾಲತೀರಿಸುವುದಕ್ಕೆ ಹಣ ಇರಲಿಲ್ಲ. ಅವನು ಅವರಿಬ್ಬರ ಸಾಲವನ್ನೂ ರದ್ದುಮಾಡಿಬಿಟ್ಟನು. ಆದ್ದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು?” ಎಂದು ಕೇಳಿದರು.