Luke 7:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಿಮೋನನು, “ಹೆಚ್ಚು ಸಾಲ ತೆಗೆದುಕೊಂಡಿದ್ದವನೇ ಎಂದು ತೋರುತ್ತದೆ” ಎಂದನು. ಯೇಸು ಸಿಮೋನನಿಗೆ, “ನೀನು ಸರಿಯಾಗಿ ಹೇಳಿದೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ,
Kannada BSI Bible 2016
ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ ಅಂದನು. ಯೇಸು ಅವನಿಗೆ - ನೀನು ಸರಿಯಾಗಿ ತೀರ್ಪುಮಾಡಿದಿ ಎಂದು ಹೇಳಿ
Kannada Bible (KNCL) BSI 2016
ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಸೀಮೋನನು ಉತ್ತರವಾಗಿ, “ಯಾರಿಗೆ ಅವನು ಹೆಚ್ಚಾಗಿ ರದ್ದು ಮಾಡಿದನೋ ಅವನೇ ಎಂದು ತೋರುತ್ತದೆ,” ಎಂದನು. ಆಗ ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪು ಮಾಡಿದೆ,” ಎಂದರು.