Luke 7:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ಸ್ತ್ರೀಯ ಕಡೆಗೆ ನೋಡಿ ಸಿಮೋನನಿಗೆ, “ಈ ಸ್ತ್ರೀಯು ನಿನಗೆ ಕಾಣುತ್ತಿರುವಳೇ? ನಾನು ನಿನ್ನ ಮನೆಯೊಳಗೆ ಬಂದಾಗ ನೀನು ನನ್ನ ಪಾದಗಳಿಗೆ ನೀರು ಕೊಡಲಿಲ್ಲ. ಆದರೆ ಈಕೆ ತನ್ನ ಕಣ್ಣೀರಿನಿಂದ ನನ್ನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿಂದ ಒರೆಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.
Kannada BSI Bible 2016
ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ - ಈ ಹೆಂಗಸನ್ನು ನೋಡಿದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ತ್ಯಾವಮಾಡಿ ತನ್ನ ತಲೆಯಕೂದಲಿನಿಂದ ಒರಸಿದಳು.
Kannada Bible (KNCL) BSI 2016
ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನನಿಗೆ, “ಈ ಸ್ತ್ರೀಯನ್ನು ಕಂಡಿದ್ದೀಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ. ಇವಳಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತನ್ನ ತಲೆಕೂದಲಿನಿಂದ ಅವುಗಳನ್ನು ಒರೆಸಿದ್ದಾಳೆ.