Luke 7:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಕೆಯ ಅನೇಕ ಪಾಪಗಳು ಕ್ಷಮಿಸಲ್ಪಟ್ಟಿವೆ ಎಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ಈಕೆ ಅಧಿಕವಾದ ಪ್ರೀತಿಯನ್ನು ತೋರಿದಳು. ಆದರೆ ಸ್ವಲ್ಪ ಕ್ಷಮೆ ಹೊಂದುವವನು ಕೇವಲ ಸ್ವಲ್ಪ ಪ್ರೀತಿಯನ್ನೇ ತೋರುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು.
Kannada BSI Bible 2016
ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ನಾನು ಹೇಳುವ ಮಾತೇನಂದರೆ - ಇವಳ ಪಾಪಗಳು ಬಹಳವಾಗಿದ್ದರೂ ಅವು ಕ್ಷವಿುಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷವಿುಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ ಅಂದನು.
Kannada Bible (KNCL) BSI 2016
ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.