Luke 7:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯಿಂದಲೇ ನಿನಗೆ ರಕ್ಷಣೆ ಆಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.
Kannada BSI Bible 2016
ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆತನು ಆ ಹೆಂಗಸಿಗೆ - ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿ ಅದೆ; ಸಮಾಧಾನದಿಂದ ಹೋಗು ಎಂದು ಹೇಳಿದನು.
Kannada Bible (KNCL) BSI 2016
ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು.