Luke 7:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೇಸು ಅವರ ಜೊತೆ ಹೊರಟನು. ಯೇಸು ಮನೆಯ ಹತ್ತಿರ ಬರುತ್ತಿರುವಾಗ, ಆ ಅಧಿಕಾರಿಯು ಸ್ನೇಹಿತರನ್ನು, “ಪ್ರಭುವೇ, ನೀನು ನನ್ನ ಮನೆಗೆ ಬರುವಷ್ಟು ನಾನು ಯೋಗ್ಯನಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.
Kannada BSI Bible 2016
ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ - ಪ್ರಭುವೇ, ತೊಂದರೆ ತೆಗೆದುಕೊಳ್ಳಬೇಡ; ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ.
Kannada Bible (KNCL) BSI 2016
ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ, ಶತಾಧಿಪತಿ ತನ್ನ ಗೆಳೆಯರ ಮುಖಾಂತರ, “ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರೊಂದಿಗೆ ಹೋದರು. ಅವರು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಯೇಸುವಿನ ಬಳಿಗೆ ಕಳುಹಿಸಿ, “ಕರ್ತದೇವರೇ, ನಿಮ್ಮನ್ನು ತೊಂದರೆ ಪಡಿಸಿಕೊಳ್ಳಬೇಡಿರಿ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ.