Luke 7:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಅಧಿಕಾರವನ್ನು ನಾನು ತಿಳಿದುಕೊಂಡಿದ್ದೇನೆ. ನಾನೂ ಮತ್ತೊಬ್ಬರ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ. ನಾನು ಒಬ್ಬ ಸೈನಿಕನಿಗೆ, ‘ಹೋಗು’ ಎಂದು ಹೇಳಿದರೆ, ಅವನು ಹೋಗುತ್ತಾನೆ. ಇನ್ನೊಬ್ಬ ಸೈನಿಕನಿಗೆ, ‘ಬಾ’ ಎಂದು ಹೇಳಿದರೆ, ಅವನು ಬರುತ್ತಾನೆ. ನನ್ನ ಆಳಿಗೆ, ‘ಇದನ್ನು ಮಾಡು’ ಎಂದು ಹೇಳಿದರೆ, ಅವನು ನನಗೆ ವಿಧೇಯನಾಗುತ್ತಾನೆ” ಎಂದು ಯೇಸುವಿಗೆ ಹೇಳಲು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು.
Kannada BSI Bible 2016
ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಎಂಬದಾಗಿ ಹೇಳಿಸಿದನು.
Kannada Bible (KNCL) BSI 2016
ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು ‘ಬಾ,’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ ‘ಹೋಗು,’ ಎಂದರೆ ಹೋಗುತ್ತಾನೆ. ಸೇವಕನಿಗೆ ‘ಇಂಥದ್ದನ್ನು ಮಾಡು,’ ಎಂದರೆ ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು,’ ಎಂದರೆ ಅವನು ಹೋಗುತ್ತಾನೆ, ಮತ್ತೊಬ್ಬನಿಗೆ ‘ಬಾ,’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.