Luke 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು ತನ್ನನ್ನು ಹಿಂಬಾಲಿಸುತ್ತಿದ್ದ ಜನರ ಕಡೆಗೆ ನೋಡಿ, “ಇಷ್ಟು ದೊಡ್ಡ ನಂಬಿಕೆಯಿರುವ ವ್ಯಕ್ತಿಯನ್ನು ನಾನು ಇಸ್ರೇಲಿನಲ್ಲಿಯೂ ನೋಡಲಿಲ್ಲ ಎಂದು ನಿಮಗೆ ಹೇಳುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.
Kannada BSI Bible 2016
ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ಹಿಂತಿರುಗಿ ನೋಡಿ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿನೋಡಿ, “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು.