Luke 8:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,
Kannada BSI Bible 2016
ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆತನು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ ಇದ್ದರು.
Kannada Bible (KNCL) BSI 2016
ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.