Luke 8:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.
Kannada BSI Bible 2016
ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.
Kannada Bible (KNCL) BSI 2016
ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’