Luke 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ಆ ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.
Kannada BSI Bible 2016
ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದು ಬಿಡುತ್ತಾನೆ; ಇವರೇ ದಾರಿಯ ಮಗ್ಗುಲಾಗಿರುವವರು.
Kannada Bible (KNCL) BSI 2016
ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು. ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆ ಹೊಂದಿಕೊಳ್ಳದಂತೆ, ಪಿಶಾಚನು ಬಂದು ಅವರ ಹೃದಯದೊಳಗಿಂದ, ಆ ವಾಕ್ಯವನ್ನು ತೆಗೆದುಬಿಡುತ್ತಾನೆ, ಇವರೇ ಆ ಬೀಜಗಳು ಬಿದ್ದ ಪಕ್ಕದ ದಾರಿಯಾಗಿದ್ದಾರೆ.