Luke 8:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.
Kannada BSI Bible 2016
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದುಹೋಗುತ್ತಾರೆ; ಇವರೇ ಬಂಡೆಯ ನೆಲವಾಗಿರುವವರು.
Kannada Bible (KNCL) BSI 2016
ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.