Luke 8:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
Kannada BSI Bible 2016
ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇರೆ ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವಮಾನದಲ್ಲಿ ಆಗುವ ಚಿಂತೆ ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಮಾಗಿಸುವದಿಲ್ಲ; ಇವರೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವರು.
Kannada Bible (KNCL) BSI 2016
ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿಬಿಡುತ್ತವೆ; ಇವರ ಫಲ ಪಕ್ವವಾಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.