Luke 8:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾವ ವ್ಯಕ್ತಿಯೂ ದೀಪವನ್ನು ಹಚ್ಚಿ ಅದನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಬಚ್ಚಿಡುವುದಿಲ್ಲ. ಮನೆಯೊಳಗೆ ಬರುವವರಿಗೆ ಸಾಕಷ್ಟು ಬೆಳಕು ದೊರೆಯಲಿ ಎಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
Kannada BSI Bible 2016
ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಮಡಿಕೆಯಿಂದ ಮುಚ್ಚುವದಿಲ್ಲ, ಮಂಚದ ಕೆಳಗೂ ಇಡುವದಿಲ್ಲ; ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
Kannada Bible (KNCL) BSI 2016
“ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚಿಡುವುದಿಲ್ಲ; ಮಂಚದ ಕೆಳಗೆ ಬಚ್ಚಿಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚುವುದಿಲ್ಲ, ಇಲ್ಲವೆ ಮಂಚದ ಕೆಳಗೆ ಇಡುವುದಿಲ್ಲ. ಆದರೆ ಮನೆಯೊಳಗೆ ಪ್ರವೇಶಿಸುವವರು ಬೆಳಕನ್ನು ಕಾಣುವಂತೆ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.