Luke 8:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.
Kannada BSI Bible 2016
ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು.
Kannada Bible (KNCL) BSI 2016
“ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು.