Luke 8:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಸ್ತ್ರೀಯರೂ ಆತನೊಡನೆ ಇದ್ದರು. ಈ ಸ್ತ್ರೀಯರು ಆತನಿಂದ ತಮ್ಮ ಕಾಯಿಲೆಗಳಿಂದ ಗುಣಹೊಂದಿದವರೂ ದೆವ್ವಗಳ ಕಾಟದಿಂದ ಬಿಡುಗಡೆ ಹೊಂದಿದವರೂ ಆಗಿದ್ದರು. ಈ ಸ್ತ್ರೀಯರಲ್ಲಿ ಒಬ್ಬಳ ಹೆಸರು ಮರಿಯಳು. ಆಕೆ ಮಗ್ದಲ ಎಂಬ ಊರಿನವಳು. ಯೇಸು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,
Kannada BSI Bible 2016
ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
Kannada BSI JV (ಕನ್ನಡ ಸತ್ಯವೇದವು J.V. (BSI))
ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರಂದರೆ - ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲದವಳೆಂಬ ಮರಿಯಳು,
Kannada Bible (KNCL) BSI 2016
ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದುರಾತ್ಮಗಳಿಂದಲೂ ರೋಗಗಳಿಂದಲೂ ಬಿಡುಗಡೆ ಹೊಂದಿದ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲಿನ ಎಂದು ಕರೆಯಲಾದ ಮರಿಯಳು,