Luke 8:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ನನ್ನ ತಾಯಿ ಮತ್ತು ನನ್ನ ತಮ್ಮಂದಿರು!” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.
Kannada BSI Bible 2016
ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ಯಾರು ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುತ್ತಾರೋ ಅವರೇ ನನಗೆ ತಾಯಿಯೂ ಸಹೋದರರು ಆಗಬೇಕು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನ್ನ ತಾಯಿ ಮತ್ತು ನನ್ನ ಸಹೋದರರು ಆಗಿದ್ದಾರೆ,” ಎಂದು ಹೇಳಿದರು.