Luke 8:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
Kannada BSI Bible 2016
ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ಸಾಯುತ್ತೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಉಬ್ಬುವ ನೀರನ್ನೂ ಗದರಿಸಿದನು. ಗದರಿಸಲು ಅವು ನಿಂತವು, ಶಾಂತವಾಯಿತು.
Kannada Bible (KNCL) BSI 2016
ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಗುರುವೇ, ಗುರುವೇ, ನಾವು ಮುಳುಗುತ್ತಿದ್ದೇವೆ!” ಎಂದರು. ಆಗ ಯೇಸು ಎದ್ದು ಬಿರುಗಾಳಿಯನ್ನೂ ರಭಸವಾಗಿ ಬರುತ್ತಿದ್ದ ಅಲೆಗಳನ್ನೂ ಗದರಿಸಿದರು; ಆಗ ಬಿರುಗಾಳಿಯು ನಿಂತು ಹೋಗಿ, ಎಲ್ಲಾ ಪ್ರಶಾಂತವಾಯಿತು.