Luke 8:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ತನ್ನ ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ನಂಬಿಕೆ?” ಎಂದು ಕೇಳಿದನು. ಶಿಷ್ಯರು ಭಯಪಟ್ಟರು ಮತ್ತು ವಿಸ್ಮಯಗೊಂಡರು. “ಈತನು ಯಾರಿರಬಹುದು? ಈತನು ಗಾಳಿಗೂ ನೀರಿಗೂ ಆಜ್ಞಾಪಿಸುತ್ತಾನೆ. ಅವು ವಿಧೇಯವಾಗುತ್ತವೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.
Kannada BSI Bible 2016
ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆತನು - ನಿಮ್ಮ ನಂಬಿಕೆ ಎಲ್ಲಿ? ಎಂದು ಅವರನ್ನು ಕೇಳಿದನು. ಅವರಾದರೋ ಭಯಪಟ್ಟು - ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡು ಅತ್ಯಾಶ್ಚರ್ಯಪಟ್ಟರು.
Kannada Bible (KNCL) BSI 2016
ಆಗ ಯೇಸು ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ವಿಶ್ವಾಸ?” ಎಂದು ಪ್ರಶ್ನಿಸಿದರು. ಶಿಷ್ಯರು ಭಯಭೀತರಾಗಿ, ‘ಗಾಳಿಗೂ ನೀರಿಗೂ ಆಜ್ಞೆಕೊಡುವ ಇವರು ಯಾರಿರಬಹುದು! ಅವು ಇವರು ಹೇಳಿದ ಹಾಗೆ ಕೇಳುತ್ತವೆಯಲ್ಲಾ!’ ಎಂದು ಸೋಜಿಗದಿಂದ ತಮ್ಮತಮ್ಮೊಳಗೇ ಮಾತನಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ತಮ್ಮ ಶಿಷ್ಯರಿಗೆ, “ನಿಮ್ಮ ನಂಬಿಕೆ ಎಲ್ಲಿ?” ಎಂದರು. ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು, “ಇವರು ಯಾರಿರಬಹುದು? ಗಾಳಿಗೂ ನೀರಿಗೂ ಸಹ ಅಪ್ಪಣೆ ಕೊಡುತ್ತಾರಲ್ಲಾ. ಅವು ಇವರು ಹೇಳಿದ ಹಾಗೆ ಕೇಳುತ್ತಾವಲ್ಲಾ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.