Luke 8:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೋಣಿಯಿಂದ ಇಳಿದಾಗ, ಆ ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಈ ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
Kannada BSI Bible 2016
ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಬಹುಕಾಲದಿಂದ ಬಟ್ಟೆಯನ್ನೇ ಹಾಕಿಕೊಳ್ಳದೆ ಯಾವ ಮನೆಯಲ್ಲಿಯೂ ಇರದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
Kannada Bible (KNCL) BSI 2016
ಯೇಸು ದಡದ ಮೇಲೆ ಕಾಲಿಟ್ಟದ್ದೇ ತಡ, ಆ ಊರಿನವನೊಬ್ಬನು ಬಂದು ಅವರನ್ನು ಎದುರುಗೊಂಡನು. ಅವನಿಗೆ ಪಿಶಾಚಿ ಹಿಡಿದಿತ್ತು. ಅವನು ಬಟ್ಟೆತೊಟ್ಟು ಬಹಳ ದಿನಗಳಾಗಿತ್ತು; ಮನೆ ಬಿಟ್ಟು ಸಮಾಧಿಗಳ ಗುಹೆಗಳಲ್ಲೇ ವಾಸಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದಡಕ್ಕೆ ಸೇರಿದಾಗ, ಬಹುಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆ ಯಾವ ಮನೆಯಲ್ಲಿ ಇರದೆ ಸಮಾಧಿಯ ಗುಹೆಗಳಲ್ಲಿ ವಾಸಿಸುತ್ತಿದ್ದ ಒಬ್ಬ ಮನುಷ್ಯನನ್ನು ಯೇಸು ಸಂಧಿಸಿದರು.