Luke 8:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು. (Verses 28-29)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.
Kannada BSI Bible 2016
ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Kannada Bible (KNCL) BSI 2016
ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.