Luke 8:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 28
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.
Kannada BSI Bible 2016
(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ - ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಕಟ್ಟಿದ್ದರೂ ಅವನು ಆ ಬಂಧಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವ ಅವನನ್ನು ಅರಣ್ಯಪ್ರದೇಶಗಳಿಗೆ ಓಡಿಸುತ್ತಿತ್ತು.
Kannada Bible (KNCL) BSI 2016
ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಆಗಲೆ ಕಟ್ಟಪ್ಪಣೆ ಮಾಡಿದ್ದರು. ಎಷ್ಟೋ ಸಾರಿ ಅದು ಅವನ ಮೇಲೆ ಬಂದಿತ್ತು. ಜನರು ಅವನನ್ನು ಸರಪಳಿ ಸಂಕೋಲೆಗಳಿಂದ ಬಂಧಿಸಿ ಕಾವಲಿನಲ್ಲಿ ಇಟ್ಟಿದ್ದರೂ ಅವುಗಳನ್ನು ಅವನು ಮುರಿದುಹಾಕುತ್ತಿದ್ದನು; ದೆವ್ವ ಅವನನ್ನು ಬೆಂಗಾಡಿಗೆ ಅಟ್ಟುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ದೆವ್ವಕ್ಕೆ ಅವನಿಂದ ಹೊರಗೆ ಬರಬೇಕೆಂದು ಯೇಸು ಅಪ್ಪಣೆ ಕೊಟ್ಟಿದ್ದರು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿದ್ದುದರಿಂದ, ಅವನು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿತನಾದರೂ ಅವನು ಆ ಬಂಧನಗಳನ್ನು ಮುರಿದು ಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಏಕಾಂತ ಸ್ಥಳಕ್ಕೆ ಓಡಿಸಿಕೊಂಡು ಹೋಗುತ್ತಿತ್ತು.