Luke 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಕೂಜನ (ಹೆರೋದನ ಸಹಾಯಕ) ಹೆಂಡತಿಯಾದ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕ ಸ್ತ್ರೀಯರು ಇದ್ದರು. ಈ ಸ್ತ್ರೀಯರು ಯೇಸುವಿಗೂ ಆತನ ಅಪೊಸ್ತಲರಿಗೂ ತಮ್ಮ ಸ್ವಂತ ಹಣದಿಂದ ಸಹಾಯ ಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.
Kannada BSI Bible 2016
ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಆತನಿಗೆ ಕೊಟ್ಟು ಉಪಚಾರಮಾಡುತ್ತಿದ್ದರು.
Kannada Bible (KNCL) BSI 2016
ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.