Luke 8:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ಹೆಸರೇನು?” ಎಂದು ಯೇಸು ಕೇಳಿದನು. “ದಂಡು” ಎಂದು ಅವನು ಉತ್ತರಿಸಿದನು. (ಏಕೆಂದರೆ ಅವನೊಳಗೆ ಅನೇಕ ದೆವ್ವಗಳು ಸೇರಿಕೊಂಡಿದ್ದವು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.
Kannada BSI Bible 2016
ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು ಅಂದನು; ಯಾಕಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದ್ದವು.
Kannada Bible (KNCL) BSI 2016
ಯೇಸು, “ನಿನ್ನ ಹೆಸರೇನು?” ಎಂದು ಕೇಳಲು, ಅವನು “ಗಣ\, ಎಂದು ಉತ್ತರಕೊಟ್ಟನು; ಏಕೆಂದರೆ, ಅನೇಕ ಪಿಶಾಚಿಗಳು ಅವನನ್ನು ಹೊಕ್ಕಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದರು. ಅದಕ್ಕವನು, “ಸೇನೆ,” ಎಂದನು. ಏಕೆಂದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.