Luke 8:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿದ್ದ ಒಂದು ಗುಡ್ಡದ ಮೇಲೆ ಹಂದಿಗಳ ಒಂದು ದೊಡ್ಡ ಗುಂಪು ಮೇಯುತ್ತಿತ್ತು. ಹಂದಿಗಳೊಳಗೆ ಹೋಗಲು ತಮಗೆ ಅನುಮತಿ ಕೊಡಬೇಕೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅನುಮತಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
Kannada BSI Bible 2016
ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಯ ಗುಡ್ಡದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಆತನನ್ನು ಬೇಡಿಕೊಂಡವು.
Kannada Bible (KNCL) BSI 2016
ಸಮೀಪದಲ್ಲೇ, ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಿನಲ್ಲಿ ಮೇಯುತ್ತಿತ್ತು. ಆ ಹಂದಿಗಳೊಳಗೆ ಸೇರಿಕೊಳ್ಳಲು ತಮಗೆ ಅಪ್ಪಣೆಯಾಗಬೇಕೆಂದು ಆ ಪಿಶಾಚಿಗಳು ಯೇಸುವನ್ನು ಬೇಡಿಕೊಂಡವು. ಅವರು ಹಾಗೇ ಅಪ್ಪಣೆಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಲ್ಲಿ ಬೆಟ್ಟದ ಮೇಲೆ ಹಂದಿಗಳ ಹಿಂಡು ಮೇಯುತ್ತಿದ್ದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು, ಅವರು ಅವುಗಳಿಗೆ ಅನುಮತಿ ಕೊಟ್ಟರು.