Luke 8:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದೆವ್ವಗಳು ಆ ಮನುಷ್ಯನಿಂದ ಹೊರಬಂದು ಹಂದಿಗಳೊಳಗೆ ಸೇರಿಕೊಂಡವು. ಆ ಕೂಡಲೇ ಹಂದಿಗಳ ಗುಂಪು ಗುಡ್ಡದ ಕೆಳಗೆ ಓಡಿಹೋಗಿ ಸರೋವರದಲ್ಲಿ ಬಿದ್ದು ಮುಳುಗಿಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
Kannada BSI Bible 2016
ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆ ಕೊಡಲು ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸುರುಕಟ್ಟಿ ಸತ್ತಿತು.
Kannada Bible (KNCL) BSI 2016
ಕೂಡಲೆ ಪಿಶಾಚಿಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಆ ಹಂದಿಗಳ ಹಿಂಡು ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ ಸರೋವರಕ್ಕೆ ಬಿದ್ದು ನೀರುಪಾಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು.