Luke 8:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.
Kannada BSI Bible 2016
ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ನಡೆದ ಸಂಗತಿಯನ್ನು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಹೆದರಿದರು.
Kannada Bible (KNCL) BSI 2016
ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.