Luke 8:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಯೇಸು, “ನಿನ್ನ ಮನೆಗೆ ಹಿಂತಿರುಗಿ ಹೋಗು. ದೇವರು ನಿನಗೆ ಮಾಡಿದ ಉಪಕಾರವನ್ನು ಜನರಿಗೆ ತಿಳಿಸು” ಎಂದು ಹೇಳಿ ಅವನನ್ನು ಕಳುಹಿಸಿದನು. ಆದ್ದರಿಂದ ಆ ಮನುಷ್ಯನು ಅಲ್ಲಿಂದ ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರವನ್ನು ಊರಲ್ಲೆಲ್ಲಾ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.
Kannada BSI Bible 2016
ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥೆಂಥ ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ವಿವರವಾಗಿ ಹೇಳು ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.
Kannada Bible (KNCL) BSI 2016
ಆದರೆ ಯೇಸು, “ನಿನ್ನ ಮನೆಗೆ ಹಿಂದಿರುಗಿಹೋಗು, ದೇವರು ನಿನಗೆ ಎಂಥಾ ಉಪಕಾರ ಮಾಡಿದ್ದಾರೆಂಬುದನ್ನು ಪ್ರಕಟಿಸು,” ಎಂದು ಅವನನ್ನು ಬೀಳ್ಕೊಟ್ಟರು. ಅವನು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ಊರಿನಲ್ಲೆಲ್ಲಾ ಪ್ರಚಾರಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ನಿನ್ನ ಮನೆಗೆ ಹಿಂದಿರುಗಿ ಹೋಗಿ ದೇವರು ನಿನಗೆ ಎಂಥಾ ಮಹಾಕಾರ್ಯಗಳನ್ನು ಮಾಡಿದ್ದಾರೆಂಬುದನ್ನು ಹೇಳು,” ಎಂದು ಅವನನ್ನು ಕಳುಹಿಸಿಬಿಟ್ಟರು. ಅವನು ತನ್ನ ಮಾರ್ಗವಾಗಿ ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ಊರೆಲ್ಲಾ ಸಾರಿದನು.