Luke 8:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಯಿರನೆಂಬ ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದನು. ಅವನು ಸಭಾಮಂದಿರದ ಅಧಿಕಾರಿಯಾಗಿದ್ದನು. ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.
Kannada BSI Bible 2016
ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಬಿದ್ದನು. ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ಸಾಯುವವಳಾಗಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಆತನು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಆತನನ್ನು ಇರಿಕಿಸುತ್ತಿದ್ದರು.
Kannada Bible (KNCL) BSI 2016
ಅಷ್ಟರಲ್ಲಿ ಪ್ರಾರ್ಥನಾಮಂದಿರದ ಅಧಿಕಾರಿ ಯಾಯೀರನೆಂಬವನು ಅಲ್ಲಿಗೆ ಬಂದು, ಯೇಸುವಿನ ಪಾದಕ್ಕೆರಗಿ, ತನ್ನ ಮನೆಗೆ ಬರಬೇಕೆಂದು ವಿನಂತಿಸಿದನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು