Luke 8:42 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನಿಗೆ ಒಬ್ಬಳೇ ಮಗಳಿದ್ದಳು. ಆಕೆಗೆ ಹನೆರಡು ವರ್ಷ ವಯಸ್ಸಾಗಿತ್ತು. ಆಕೆಯು ಸಾಯುವ ಸ್ಥಿತಿಯಲ್ಲಿದ್ದಳು. ಯೇಸುವು ಯಾಯಿರನ ಮನೆಗೆ ಹೋಗುತ್ತಿದ್ದಾಗ ಜನರು ಆತನ ಸುತ್ತಲೂ ಸೇರಿಬಂದರು.
Kannada BSI Bible 2016
ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
Kannada Bible (KNCL) BSI 2016
ಕಾರಣ - ಸುಮಾರು ಹನ್ನೆರಡು ವರ್ಷ ವಯಸ್ಸಿನ ಅವನ ಏಕೈಕ ಪುತ್ರಿ ಮರಣಾವಸ್ಥೆಯಲ್ಲಿದ್ದಳು. ಯೇಸು ಹೊರಟುಬರುವಾಗ ಜನರ ಗುಂಪು ಅವರನ್ನು ಸುತ್ತಲೂ ಒತ್ತರಿಸುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಸುಮಾರು ಹನ್ನೆರಡು ವರ್ಷದ, ಅವನ ಒಬ್ಬಳೇ ಮಗಳು, ಸಾಯುವ ಹಾಗಿದ್ದಳು. ಯೇಸು ದಾರಿಯಲ್ಲಿ ಹೋಗುತ್ತಿದ್ದಾಗ, ಜನರು ಅವರನ್ನು ನೂಕಾಡುತ್ತಿದ್ದರು.