Luke 8:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿದ್ದ ಸ್ತ್ರೀಯೊಬ್ಬಳು ಅಲ್ಲಿದ್ದಳು. ಆಕೆ ತನ್ನಲ್ಲಿದ್ದ ಹಣವನ್ನೆಲ್ಲಾ ವೈದ್ಯರಿಗೆ ಖರ್ಚು ಮಾಡಿದ್ದಳು. ಆದರೆ ಯಾವ ವೈದ್ಯನಿಗೂ ಆಕೆಯನ್ನು ವಾಸಿಮಾಡಲು ಸಾಧ್ಯವಾಗಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.
Kannada BSI Bible 2016
ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಬಂದಳು.
Kannada Bible (KNCL) BSI 2016
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಾ ಇದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿ ಇದ್ದಳು. ಆಕೆ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ವೈದ್ಯರಿಗೆ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.