Luke 8:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯು ಯೇಸುವಿನ ಹಿಂದೆ ಬಂದು ಆತನ ನಿಲುವಂಗಿಯ ಕೆಳಭಾಗವನ್ನು ಮುಟ್ಟಿದಳು. ಆ ಕ್ಷಣವೇ ಆಕೆಯ ರಕ್ತಸ್ರಾವ ನಿಂತುಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
Kannada BSI Bible 2016
ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಒಬ್ಬರಿಂದಲೂ ಗುಣ ಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಉಡುಪಿನ ಗೊಂಡೆಯನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತ ಹರಿಯುವದು ನಿಂತಿತು.
Kannada Bible (KNCL) BSI 2016
ಆಕೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. ಆ ಕ್ಷಣವೇ ಅವಳ ರಕ್ತಸ್ರಾವವು ನಿಂತುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಯೇಸುವಿನ ಹಿಂದೆ ಬಂದು ಅವರ ಉಡುಪಿನ ಅಂಚನ್ನು ಮುಟ್ಟಿದಳು, ಕೂಡಲೇ ಆಕೆಯ ರಕ್ತಸ್ರಾವವು ನಿಂತುಹೋಯಿತು.