Luke 8:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದನು. ಜನರೆಲ್ಲರೂ ತಾವು ಮುಟ್ಟಲಿಲ್ಲವೆಂದು ಹೇಳುತ್ತಿರಲು ಪೇತ್ರನು, “ಗುರುವೇ, ಇಷ್ಟೊಂದು ಜನರು ಮೇಲೆ ಬೀಳುತ್ತಾ ನಿನ್ನನ್ನು ನೂಕುತ್ತಿದ್ದಾರಲ್ಲಾ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.
Kannada BSI Bible 2016
ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು - ನನ್ನನ್ನು ಮುಟ್ಟಿದವರಾರು ಎಂದು ಕೇಳಿದನು. ಎಲ್ಲರು - ನಾನಲ್ಲ ನಾನಲ್ಲ ಅನ್ನಲು ಪೇತ್ರನು - ಗುರುವೇ ಎಷ್ಟೋ ಜನರು ನಿನ್ನನ್ನು ಒತ್ತೊತ್ತಿ ಮೈ ಮೇಲೆ ಬೀಳುತ್ತಿದ್ದಾರಲ್ಲಾ ಅಂದನು.
Kannada Bible (KNCL) BSI 2016
ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದರು. ಯಾರೂ ಮುಟ್ಟಲಿಲ್ಲವೆಂದು ಎಲ್ಲರು ಹೇಳುತ್ತಿರಲು ಪೇತ್ರನು, “ಪ್ರಭೂ, ಇಷ್ಟೊಂದು ಜನರು ಮೇಲೆ ಮೇಲೆ ಬೀಳುತ್ತಾ ನಿಮ್ಮನ್ನು ಒತ್ತರಿಸುತ್ತಿದ್ದಾರಲ್ಲಾ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದರು. ಎಲ್ಲರೂ ನಿರಾಕರಿಸಿದರು, ಪೇತ್ರನು ಯೇಸುವಿಗೆ, “ಬೋಧಕರೇ, ಇಷ್ಟೊಂದು ಜನರು ನಿಮ್ಮನ್ನು ನೂಕುತ್ತಾ ನಿಮ್ಮನ್ನು ಒತ್ತುತ್ತಿದ್ದಾರಲ್ಲಾ” ಎಂದನು.