Luke 8:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನು ತಾನು ಅಡಗಿಕೊಂಡಿರಲು ಸಾಧ್ಯವಿಲ್ಲವೆಂದು ತಿಳಿದುಕೊಂಡ ಆ ಸ್ತ್ರೀಯು ನಡುಗುತ್ತಾ ಆತನ ಮುಂದೆ ಬಂದು ಅಡ್ಡಬಿದ್ದು ತಾನು ಮುಟ್ಟಿದ್ದಕ್ಕೆ ಕಾರಣವನ್ನು ಎಲ್ಲರ ಎದುರಿನಲ್ಲಿ ತಿಳಿಸಿದಳು. ಅಲ್ಲದೆ ಆತನನ್ನು ಮುಟ್ಟಿದಾಕ್ಷಣವೇ ತನಗೆ ವಾಸಿಯಾಯಿತೆಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು.
Kannada BSI Bible 2016
ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಂಗಸು ತಾನು ಮರೆಯಾಗಿಲ್ಲವೆಂತ ತಿಳಿದು ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ತಾನು ಇಂಥ ಕಾರಣದಿಂದ ಈತನನ್ನು ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂತಲೂ ಎಲ್ಲಾ ಜನರ ಮುಂದೆ ತಿಳಿಸಿದಳು.
Kannada Bible (KNCL) BSI 2016
ಆಗ ಆ ಮಹಿಳೆ ತಾನು ಮಾಡಿದ್ದನ್ನು ಇನ್ನು ಮುಚ್ಚಿಡಲು ಸಾಧ್ಯವಿಲ್ಲವೆಂದು ಅರಿತು, ನಡುಗುತ್ತಾ ಬಂದು, ಯೇಸುವಿಗೆ ಅಡ್ಡಬಿದ್ದಳು. ತಾನು ಮುಟ್ಟಿದ್ದಕ್ಕೆಕಾರಣವನ್ನೂ ತಾನು ತಕ್ಷಣ ಗುಣಹೊಂದಿದ್ದನ್ನೂ ಎಲ್ಲರ ಮುಂದೆ ಬಹಿರಂಗಪಡಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತ್ರೀಯು, ತಾನು ಇನ್ನು ಮರೆಮಾಡಲು ಸಾಧ್ಯವಿಲ್ಲವೆಂದು ತಿಳಿದು, ನಡುಗುತ್ತಾ ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಯಾವ ಕಾರಣದಿಂದ ಆಕೆಯು ಯೇಸುವನ್ನು ಮುಟ್ಟಿದಳೆಂದೂ ಹೇಗೆ ತಾನು ಕೂಡಲೇ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಅವರಿಗೆ ತಿಳಿಯಪಡಿಸಿದಳು.