Luke 8:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿರದ ಅಧಿಕಾರಿಯ (ಯಾಯಿರನ) ಮನೆಯಿಂದ ಒಬ್ಬ ವ್ಯಕ್ತಿ ಬಂದು, “ನಿನ್ನ ಮಗಳು ಸತ್ತುಹೋದಳು! ಈಗ ಬೋಧಕನಿಗೆ (ಯೇಸುವಿಗೆ) ತೊಂದರೆ ಕೊಡಬೇಡ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.
Kannada BSI Bible 2016
ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಇನ್ನೂ ಮಾತಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು - ನಿನ್ನ ಮಗಳು ಸತ್ತಳು; ಗುರುವಿಗೆ ತೊಂದರೆ ಕೊಡಬೇಡ ಅಂದನು.
Kannada Bible (KNCL) BSI 2016
ಯೇಸುಸ್ವಾಮಿ ಇನ್ನೂ ಮಾತನಾಡುತ್ತಾ ಇರುವಾಗಲೇ ಒಬ್ಬನು ಯಾಯೀರನ ಮನೆಯಿಂದ ಬಂದು ಆ ಯಾಯಿರನಿಗೆ, “ನಿಮ್ಮ ಮಗಳು ತೀರಿಹೋದಳು. ಇನ್ನು ಗುರುವಿಗೆ ತೊಂದರೆಕೊಡಬೇಡಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಒಬ್ಬನು ಬಂದು ಅಧಿಕಾರಿಗೆ, “ನಿನ್ನ ಮಗಳು ತೀರಿಹೋದಳು, ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದನು.