Luke 8:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೊಲಕ್ಕೆ ಹೋದನು. ಬೀಜ ಬಿತ್ತುವಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದು ಜನರ ತುಳಿತಕ್ಕೆ ಸಿಕ್ಕಿಕೊಂಡವು. ಹಕ್ಕಿಗಳು ಬಂದು ಅವುಗಳನ್ನೆಲ್ಲ ತಿಂದುಬಿಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.
Kannada BSI Bible 2016
ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿತ್ತುವವನು ಬೀಜವನ್ನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.
Kannada Bible (KNCL) BSI 2016
“ಒಬ್ಬ ರೈತನು ಬಿತ್ತುವುದಕ್ಕೆ ಹೋದನು. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಅವು ಕಾಲ್ತುಳಿತಕ್ಕೆ ಸಿಕ್ಕಿಹೋದವು. ಅವುಗಳನ್ನು ಆಕಾಶದ ಪಕ್ಷಿಗಳು ತಿಂದುಬಿಟ್ಟವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುತ್ತಿರುವಾಗ, ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು; ಅವು ಕಾಲ್ತುಳಿತಕ್ಕೆ ಒಳಗಾದವು, ಆಕಾಶದ ಪಕ್ಷಿಗಳು ಅವುಗಳನ್ನು ಹೆಕ್ಕಿ ತಿಂದವು.