Luke 8:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಯಾಯಿರನ ಮನೆಗೆ ಹೋದನು. ಪೇತ್ರ, ಯೋಹಾನ, ಯಾಕೋಬ ಮತ್ತು ಹುಡುಗಿಯ ತಂದೆತಾಯಿಗಳಿಗೆ ಮಾತ್ರ ತನ್ನೊಂದಿಗೆ ಬರಲು ಅನುಮತಿಕೊಟ್ಟನು. ಬೇರೆ ಯಾರೂ ಒಳಗೆ ಬರಕೂಡದೆಂದು ಯೇಸು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.
Kannada BSI Bible 2016
ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆತನು ಆ ಮನೆಗೆ ಹೋಗಿ ಪೇತ್ರನು ಯೋಹಾನನು ಯಾಕೋಬನು ಆ ಹುಡುಗಿಯ ತಂದೆತಾಯಿಗಳು ಇಷ್ಟು ಮಂದಿಯನ್ನೇ ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಲಿಲ್ಲ.
Kannada Bible (KNCL) BSI 2016
ಯೇಸು ಅವನ ಮನೆಯನ್ನು ಸೇರಿದುದೇ, ಪೇತ್ರ, ಯೊವಾನ್ನ ಹಾಗೂ ಯಕೋಬ ಮತ್ತು ಆ ಬಾಲಕಿಯ ತಂದೆತಾಯಿ ಇವರ ಹೊರತು ಯಾರನ್ನೂ ತನ್ನೊಡನೆ ಒಳಕ್ಕೆ ಬರಗೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಯಾಯೀರನ ಮನೆಯೊಳಕ್ಕೆ ಬಂದಾಗ ಪೇತ್ರ, ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಬರಗೊಡಲಿಲ್ಲ.