Luke 8:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತುಹೋದ ಆ ಬಾಲಕಿಗಾಗಿ ಜನರೆಲ್ಲರೂ ದುಃಖದಿಂದ ಗೋಳಾಡುತ್ತಿದ್ದರು. ಆದರೆ ಯೇಸು ಅವರಿಗೆ, “ಅಳಬೇಡಿ, ಆಕೆ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು,
Kannada BSI Bible 2016
ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡುಕೊಳ್ಳುತ್ತಾ ಇದ್ದರು. ಯೇಸು - ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ದೆಮಾಡುತ್ತಾಳೆ ಅನ್ನಲಾಗಿ
Kannada Bible (KNCL) BSI 2016
ಇತ್ತ, ಸತ್ತ ಬಾಲಕಿಗಾಗಿ ಎಲ್ಲರೂ ಅತ್ತು ಗೋಳಾಡುತ್ತಾ ಇದ್ದರು. ಯೇಸುವಾದರೋ, “ಅಳಬೇಡಿ, ಅವಳು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಯೇಸು, “ಅಳಬೇಡಿರಿ, ಆಕೆಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ,” ಎಂದರು.