Luke 9:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ಒಟ್ಟಾಗಿ ಕರೆದು ಅವರಿಗೆ ಕಾಯಿಲೆಗಳನ್ನು ವಾಸಿಮಾಡುವ ಶಕ್ತಿಯನ್ನೂ ದೆವ್ವಗಳ ಮೇಲೆ ಅಧಿಕಾರವನ್ನೂ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,
Kannada BSI Bible 2016
ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಅಧಿಕಾರಗಳನ್ನು ಕೊಟ್ಟು
Kannada Bible (KNCL) BSI 2016
ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ‍ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,