Luke 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
Kannada BSI Bible 2016
ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ವಿಂಗಡವಾಗಿ ಕರಕೊಂಡು ಹೋದನು.
Kannada Bible (KNCL) BSI 2016
ಇತ್ತ ಪ್ರೇಷಿತರು ಹಿಂದಿರುಗಿ ಬಂದು ತಾವು ಮಾಡಿದ್ದೆಲ್ಲವನ್ನೂ ಯೇಸುಸ್ವಾಮಿಗೆ ವರದಿಮಾಡಿದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೆತ್ಸಾಯಿದ ಎಂಬ ಊರಿನತ್ತ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.