Luke 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.
Kannada BSI Bible 2016
ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಜನರ ಗುಂಪು ಇದನ್ನು ತಿಳಿದು ಆತನ ಹಿಂದೆ ಹೋಗಲು ಆತನು ಅವರನ್ನು ಪ್ರೀತಿಯಿಂದ ಸ್ವೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತಾಡಿ ಕ್ಷೇಮಬೇಕಾದವರಿಗೆ ವಾಸಿಮಾಡಿದನು.
Kannada Bible (KNCL) BSI 2016
ಇದನ್ನು ತಿಳಿದುಕೊಂಡು ಜನಸಮೂಹ ಅವರನ್ನು ಹಿಂಬಾಲಿಸಿತು. ಯೇಸು ಅವರನ್ನು ಸ್ವಾಗತಿಸಿ, ದೇವರ ಸಾಮ್ರಾಜ್ಯದ ವಿಷಯವಾಗಿ ಹೇಳಿ, ಅಗತ್ಯವಿದ್ದವರಿಗೆ ಆರೋಗ್ಯದಾನ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.