Luke 9:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,
Kannada BSI Bible 2016
ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊತ್ತು ಇಳಿಯುತ್ತಾ ಬಂತು. ಆ ಹನ್ನೆರಡು ಮಂದಿ ಶಿಷ್ಯರು ಆತನ ಬಳಿಗೆ ಬಂದು - ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಇಳುಕೊಂಡು ಊಟಕ್ಕೆ ಬೇಕಾದ ಪದಾರ್ಥಗಳನ್ನು ದೊರಕಿಸಿಕೊಳ್ಳಲಿ; ನಾವು ಇಲ್ಲಿ ಅಡವಿಯ ಸ್ಥಳದಲ್ಲಿ ಇದ್ದೇವಲ್ಲಾ ಎಂದು ಆತನಿಗೆ ಹೇಳಲಾಗಿ
Kannada Bible (KNCL) BSI 2016
ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನ ಪ್ರದೇಶ, ಜನರನ್ನು ಕಳುಹಿಸಿಬಿಡಿ; ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.