Luke 9:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.
Kannada BSI Bible 2016
ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ನೀವೇ ಅವರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕವರು - ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ; ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೋ? ಅಂದರು.
Kannada Bible (KNCL) BSI 2016
ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರು ಕೊಡಿ,” ಎಂದರು. ಅವರು, “ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ; ನಾವು ಹೋಗಿ ಇವರೆಲ್ಲರಿಗೆ ಬೇಕಾಗುವಷ್ಟು ಊಟ ಕೊಂಡುಕೊಂಡು ಬರಬೇಕೆ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಅವರಿಗೆ, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಅದಕ್ಕೆ ಅವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನುಗಳಿಗಿಂತ ಹೆಚ್ಚೇನು ಇಲ್ಲ. ನಾವು ಹೋಗಿ ಈ ಜನರಿಗೆ ಬೇಕಾಗುವಷ್ಟು ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದರು.