Luke 9:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಅಲ್ಲಿ ಸುಮಾರು ಐದು ಸಾವಿರ ಮಂದಿ ಗಂಡಸರು ಇದ್ದರು.) ಯೇಸು ತನ್ನ ಶಿಷ್ಯರಿಗೆ, “ಇವರನ್ನು ಸುಮಾರು ಐವತ್ತೈವತ್ತು ಜನರಂತೆ ಸಾಲಾಗಿ ಕುಳ್ಳಿರಿಸಿರಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, “ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ” ಎಂದು ಹೇಳಲು,
Kannada BSI Bible 2016
ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಂಡಸರೇ ಹೆಚ್ಚು ಕಡಿಮೆ ಐದುಸಾವಿರ ಮಂದಿಯಿದ್ದರು. ಆಗ ಆತನು ತನ್ನ ಶಿಷ್ಯರಿಗೆ - ಇವರನ್ನು ಒಂದೊಂದು ಪಂಙ್ತಿಗೆ ಹೆಚ್ಚು ಕಡಿಮೆ ಐವತ್ತೈವತ್ತರಂತೆ ಕೂಡ್ರಿಸಿರಿ ಎಂದು ಹೇಳಲು
Kannada Bible (KNCL) BSI 2016
ಏಕೆಂದರೆ ಅಲ್ಲಿ ಗಂಡಸರೇ ಸುಮಾರು ಐದು ಸಾವಿರಮಂದಿ ಇದ್ದರು. ಆಗ ಯೇಸು ಶಿಷ್ಯರಿಗೆ, “ಇವರನ್ನು ಐವತ್ತು ಐವತ್ತರಂತೆ ಪಂಕ್ತಿಯಾಗಿ ಕೂರಿಸಿರಿ,” ಎಂದು ಹೇಳಲು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಮಂದಿ ಇದ್ದರು. ಆಗ ಯೇಸು ತಮ್ಮ ಶಿಷ್ಯರಿಗೆ, “ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂರಿಸಿರಿ,” ಎಂದರು.