Luke 9:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ಕೈಯಲ್ಲಿ ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಯೇಸು ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚಬೇಕೆಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.
Kannada BSI Bible 2016
ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಶಿಷ್ಯರ ಕೈಗೆ ಕೊಟ್ಟು - ಈ ಜನರ ಗುಂಪಿಗೆ ಹಂಚಿರಿ ಅಂದನು.
Kannada Bible (KNCL) BSI 2016
ಅನಂತರ ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ಅವುಗಳನ್ನು ಮುರಿದು ಜನಸಮೂಹಕ್ಕೆ ಬಡಿಸುವಂತೆ ಶಿಷ್ಯರಿಗೆ ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು.