Luke 9:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲರೂ ತಿಂದು ತೃಪ್ತರಾದರು. ತಿನ್ನಲಾರದೆ ಬಿಟ್ಟಿದ್ದ ಆಹಾರದ ತುಂಡುಗಳನ್ನು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.
Kannada BSI Bible 2016
ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರು ಊಟಮಾಡಿ ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.
Kannada Bible (KNCL) BSI 2016
ಎಲ್ಲರೂ ಹೊಟ್ಟೆ ತುಂಬ ತಿಂದು ಸಂತೃಪ್ತರಾದರು. ಇನ್ನು ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿ ತುಂಬ ಆದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.