Luke 9:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಮ್ಮೆ ಯೇಸು ಏಕಾಂತವಾಗಿ ಪ್ರಾರ್ಥನೆ ಮಾಡುತ್ತಿದ್ದನು. ಆತನ ಶಿಷ್ಯರು ಒಟ್ಟಾಗಿ ಅಲ್ಲಿಗೆ ಬಂದರು. ಯೇಸು ಅವರಿಗೆ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,
Kannada BSI Bible 2016
ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದಾನೊಂದು ದಿವಸ ಆತನು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಆತನು - ನನ್ನನ್ನು ಸಾಮಾನ್ಯ ಜನರು ಯಾರು ಅನ್ನುತ್ತಾರೆ ಎಂದು ಅವರನ್ನು ಕೇಳಿದ್ದಕ್ಕೆ
Kannada Bible (KNCL) BSI 2016
ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು.